25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಪೋಷಕರ ಸಭೆಯು ಜು.3ರಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ. ನಂದ ರವರ ಅಧ್ಯಕ್ಷತೆಯನ್ನು ವಹಿಸಿದ್ದರು.

ಮಗುವಿನ ಬೆಳವಣಿಗೆ, ಕ್ರೀಡಾ ಚಟುವಟಿಕೆ, ದೈಹಿಕ, ಮಾನಸಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಯ ಬಗ್ಗೆ ಪೋಷಕರು ತಿಳಿದುಕೊಳ್ಳಲು ಪೋಷಕರ ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಮುಖ್ಯ ಅತಿಥಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಪಿ. ಶ್ರೀನಿವಾಸ ರಾವ್ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾ.ಪಂ. ಸದಸ್ಯ ಹರೀಶ್ ಸುವರ್ಣ, ಗ್ರಾ.ಪಂ. ಸಿಬ್ಬಂದಿ ದೇವಿಪ್ರಸಾದ್ ಬೊಳ್ಮಾ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶ್ರೀಮತಿ ಚಂದ್ರಾವತಿ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಉಜಿರೆ ದಂತ ಚಿಕಿತ್ಸಾಲಯದ ಡಾ. ದೀಪಾಲಿ ಡೋಂಗ್ರೆ, ಶಾಲಾ ಪ್ರಭಾರ ಮುಖ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಹಾಗೂ ಶಾಲಾ ನಾಯಕಿ ಅನನ್ಯ ಉಪಸ್ಥಿತರಿದ್ದರು.

ದೀಪಾಲಿ ಡೋಂಗ್ರೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಶಾಲೆಯಲ್ಲಿ ನೀಡುವ ಪೌಷ್ಟಿಕ ಆಹಾರ ಸೇವನೆಯಿಂದಾಗುವ ಪ್ರಯೋಜನದ ಕುರಿತು ಪೋಷಕರಿಗೆ ಅರಿವನ್ನು ಮೂಡಿಸಿದರು. ಶಾಲಾ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಮುಂದೆ ಬರಲು ಶಾಸ್ತ್ರೀಯ ಸಂಗೀತ, ನೃತ್ಯ, ಚಿತ್ರಕಲೆ ಮತ್ತು ಕರಾಟೆ ತರಗತಿಯನ್ನು ನೀಡುವ ಕುರಿತು ಆ ಕಲೆಯಲ್ಲಿ ಪರಿಣಿತರಾದ ಗುರುಗಳು ಪೋಷಕರಿಗೆ ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಶೇಕಡಾ 90% ರಷ್ಟು ಭಾಗವಹಿಸಿದ್ದು ವಿಶೇಷವಾಗಿತ್ತು.ಹಿರಿಯ ವಿದ್ಯಾರ್ಥಿಯಾದ ಸುದರ್ಶನ್ ಕನ್ಯಾಡಿ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕಿ ಜೆಸಿಂತಾ ನೊರೊನ್ಹ ಧನ್ಯವಾದವನ್ನು ಮತ್ತು ಸಹ ಶಿಕ್ಷಕಿ ಶಾರದಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!