September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

ಬೆಳ್ತಂಗಡಿ:ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜು. 12ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ತಾಲೂಕು ಕಾನೂನು ಸೇವಾ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯಲಿದ್ದು, ರಾಜಿ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮನು ಬಿ.ಕೆ ಹೇಳಿದರು.

ಅವರು ಜು‌.3 ರಂದು ಬೆಳ್ತಂಗಡಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಲೋಕ್ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಲು ಪೂರ್ವಭಾವಿ ಸಭೆಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ನಡೆಸಲಾಗಿದೆ.ವಕೀಲರು ಮತ್ತು ಇನ್ಸೂರೆನ್ಸ್ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ಮಾಡಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥ ಮಾಡಲು ಅವರವರ ಕಕ್ಷಿದಾರರಿಗೆ ಮನವೊಲಿಸುವಂತೆ ಕೋರಿಕೊಳ್ಳಲಾಗಿದೆ. ಈ ರೀತಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡುವುದರಿಂದ ಹಣ ಮತ್ತು ಸಮಯದ ಉಳಿತಾಯ,ಮಾನಸಿಕ ನೆಮ್ಮದಿ ಮತ್ತು ತ್ವರಿತ ನ್ಯಾಯದಾನ ಆಗುತ್ತದೆ. ಈ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ರಾಜಿ ಮಾಡಲು ಇಚ್ಚಿಸುವ ಎಲ್ಲರೂ ಸಹ ನ್ಯಾಯಾಲಯಕ್ಕೆ ಹಾಜರಾಗಿ ಲೋಕ್ ಅದಾಲತ್‌ನ್ನು ಯಶಸ್ವಿಗೊಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಸಂದೇಶ್,ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ವಿಜೆಯೇಂದ್ರ ಡಿ.ಎಸ್,ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ,ಕಾರ್ಯದರ್ಶಿ ನವೀನ್ ಬಿ.ಕೆ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya
error: Content is protected !!