25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆ ಹಾಗೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜು.10 ರಿಂದ ಆ.20ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾದ ಕೋನಳ್ಳಿಯ ಶ್ರೀ ವನದುರ್ಗಾ ದೇವಾಲಯದಲ್ಲಿ ನಡೆಯಲಿದೆ.


ಜು.10 ಗುರುವಾರ ಗುರುಪೂರ್ಣಿಮೆ ಯಂದು ವನದುರ್ಗಾ ದೇವಾಲಯದಲ್ಲಿ ಬೆಳಿಗ್ಗೆ 7.೦೦ ಗಂಟೆಯಿಂದ 9.೦೦ ಗಂಟೆಯವರೆಗೆ ಚಾತುರ್ಮಾಸ್ಯ ವ್ರತ ಸಂಕಲ್ಪ ಪ್ರಯುಕ್ತ ರಾಮತಾರಕ ಯಜ್ಞ ಹಾಗೂ ವೈದಿಕ ವಿಧಿ-ವಿಧಾನಗಳು ನೆರವೇರಲಿದೆ. ಕುಮುಟಾ ನಾಮಧಾರಿ ಸಭಾಭವನದ ಆವರಣದಲ್ಲಿರುವ ಶ್ರೀ ವೆಂಕಟ್ರಮಣ ದೇವರಿಗೆ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಶ್ರೀಗಳ ಪುರಪ್ರವೇಶದ ಭವ್ಯ ಮೆರವಣಿಗೆ ಪ್ರಾರಂಭಗೊಳ್ಳಲಿದೆ.


ದಿನಂಪ್ರತಿ ಹೆಸರಾಂತ ಕಲಾ ತಂಡಗಳಿಂದ ಭರತನಾಟ್ಯ ವೈಭವ, ಗೀತಾರೂಪಕ, ತಾಳೆಗರಿ ರಾಮಾಯಣ ಪಠಣ, ಕುಂಚ ಗೀತಾ ರಾಮ ಕಥಾ, ಸುಗಮ ಸಂಗೀತ, ಭಜನೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಗುರುಪೂಜೆ, ಅನ್ನಸಂತರ್ಪಣೆ ಜರುಗಲಿದೆ.

Related posts

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya
error: Content is protected !!