ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಟ್ಟದ ಪ್ರತಿಭಾಕಾರಂಜಿಯನ್ನು ಉದ್ಘಾಟಿಸಲಾಯಿತು.


ಶಾಲಾ ಮಟ್ಟದ ಪ್ರತಿಭಾ ಕಾರಂಜಿಯನ್ನು ಸ್ಥಳೀಯ ಪ್ರಗತಿಪರ ಕೃಷಿಕ ದೇವಣ್ಣಗೌಡ ರವರು ದೀಪ ಪ್ರಜ್ವಲನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಶಾಲಾ ಮಟ್ಟದ ಪ್ರತಿಭಾಕಾರಂಜಿಯಿಂದ ವಿದ್ಯಾರ್ಥಿಗಳ ಪಠ್ಯತರ ಚಟುವಟಿಕೆಗಳಿಗೆ ಅವಕಾಶವನ್ನು ನೀಡಿದಂತಾಗುತ್ತದೆ ಇಂಥ ಅವಕಾಶಗಳನ್ನು ಶಾಲಾ ಮಟ್ಟದಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಯಿಂದ ಮಕ್ಕಳ ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಜೊತೆಗೆ ಮಕ್ಕಳ ಬಹುಮುಖ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಗೌರೀಶ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ಶೀಲಾ ಎನ್ ಧನ್ಯವಾದವಿತ್ತರು.

ಶಾಲಾ ಶಿಕ್ಷಕಿಯಾದ ಜಿತಿಕ್ಷ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1,979 ಕೋಟಿ ವ್ಯವಹಾರ, ರೂ.5.85 ಕೋಟಿ ಲಾಭ, ಶೇ.15 ಡಿವಿಡೆಂಡ್

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya
error: Content is protected !!