September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಬೆಳ್ತಂಗಡಿ: ರಾಜ್ಯದಲ್ಲಿ ಪ್ರತಿ ವರ್ಷ ಜುಲೈ 1 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯಾದ ‘ಮಂಗಳೂರು ಸಮಾಚಾರ’ ಈ ದಿನದಂದೇ ಪ್ರಕಟವಾಗಿದ್ದು ಇದರ ಅಂಗವಾಗಿ ಪತ್ರಿಕೋದ್ಯಮ ಹಾಗೂ ಅದು ಕಾಲಕ್ಕೆ ತಕ್ಕಂತೆ ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಕರ್ನಾಟಕದಲ್ಲಿ ಜುಲೈ 1 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.೫ರಂದು ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಪತ್ರಿಕಾ ದಿನಾಚರಣೆ- 2025 ಜರುಗಲಿದೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮ ಉದ್ಘಾಟಿಸಲಿರುವರು,ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಮಂಗಳೂರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಭಾಗವಹಿಸುವರು. ಬೆಂಗಳೂರು ಆಕಾಶವಾಣಿ ಸಹಾಯಕ ನಿರ್ದೇಶಕ ಜಿತು ನಿಡ್ಲೆ ಉಪನ್ಯಾಸ ನೀಡಲಿದ್ದಾರೆ.

ಈ ಸಂದರ್ಭದಲ್ಲಿ 2024-25ನೇ ಸಾಲಿನ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ.ಜೊತೆಗೆ ಅಸೌಖ್ಯದಿಂದ ಬಳಲುತ್ತಿರುವವರಿಗೆ ದಿತಿ ಸಾಂತ್ವನ ನಿಧಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!