23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ2025-26 ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮವು ಜುಲೈ 1 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿ, ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿ, ಎಲ್ಲಾರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೆಸ್ಟ್ ಡೇಬುಟ್ ಆಕ್ಟ್ರೆಸ್ ಅವಾರ್ಡ್ ವಿನ್ನರ್ ಅಟ್ ಕೋಸ್ಟಾಲ್ ವುಡ್ ಫಿಲಂ ಅವಾರ್ಡ್ -2025 ರಾದ ಕುಮಾರಿ ವೆನ್ಸಿಟ ಡಯಾಸ್ ರವರು ಆಗಮಿಸಿ ನಮಗೆ ಜೀವನದಲ್ಲಿ ತಾಳ್ಮೆ ಬಹು ಮುಖ್ಯ, ನಮ್ಮ ಜೀವನವು ಅರಳಬೇಕೆಂದು ಎಂದು ಹೇಳಿ, ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿದರು.ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಕುಮಾರಿ ವೆನ್ಸಿಟ ಡಯಾಸ್ ಅವರನ್ನು ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಪಥ ಸಂಚಲನದ ಮೂಲಕ ವೇದಿಕೆಗೆ ಆಗಮಿಸಿ, ತಮ್ಮ ನಾಯಕತ್ವದ ಪದವಿಯನ್ನು ಗಣ್ಯ ವ್ಯಕ್ತಿಗಳಿಂದ ಪಡೆದು, ಪ್ರತಿಜ್ಞೆಯನ್ನು ಸ್ವೀಕರಿಸಿದರು. ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು, ಮುಖ್ಯ ಅತಿಥಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಶುಭ ಕೋರಿದರು.2025-26 ನೇ ಶೈಕ್ಷಣಿಕ ವರ್ಷದ ಶಾಲಾ ವಿವಿಧ ಕ್ಲಬ್ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯವರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಮಡಂತ್ಯಾರು ಚರ್ಚಿನ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ -ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಹಶಿಕ್ಷಕಿಯರಾದ ಐಡಾ ಡಿಕುನ್ಹಾ, ಮಲ್ಲಿಕಾ ರವರು ತರಬೇತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು.ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಎಮ್ . ವೈ ಮುಹಿಮುದ್ದೀನ್ ಹಾಗೂ ಅಶ್ನಿ ನಿರೂಪಿಸಿ, ಮಹಮ್ಮದ್ ಜುಹೈಬ್ ಸ್ವಾಗತಿಸಿ, ಟಯಾನಿಟ ಸಿಕ್ವೇರಾ ವಂದಿಸಿದರು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya
error: Content is protected !!