24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಲಯ ಅರಣ್ಯ ಇಲಾಖೆ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ
ಇವರ ಸಂಯುಕ್ತ ಆಶ್ರಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಯೋಗದೊಂದಿಗೆ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.


ಶಾಲಾಭಿವೃಧ್ದಿ ಸಮಿತಿ ಸದಸ್ಯೆ ಶ್ರೀಮತಿ ಸುಂದರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ ತಾಲೂಕು ಯೋಜನಾಧಿಕಾರಿ ಯಶೋಧರರವರು ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸುವ ಕಾರ್ಯ ಮನೆಯಿಂದಲೇ ಪ್ರಾರಂಭವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮಂಜುಳಾ ,ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ , ವಲಯ ಮೇಲ್ವಿಚಾರki ಶ್ರೀಮತಿ ಶಶಿಕಲಾ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀಮತಿ ಮಂಜುಳಾ ಕಾರಂತ್, ಅರಸಿನಮಕ್ಕಿ ಶೌರ್ಯ ಘಟಕದ ಅವಿನಾಶ್ ಭಿಡೆ ಉಪಸ್ಥಿತರಿದ್ದರು.


ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕುಮಾರಿ ಮಾನಸ ಮತ್ತು ತಂಡ ಪ್ರಾರ್ಥಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಕನ್ನಡ ಶಿಕ್ಷಕಿ ದಿವ್ಯಾ ವಾಚಿಸಿದರು.
ದೈಹಿಕ ಶಿಕ್ಷಣ ಶಿಕ್ಷಕಿ ಮೀನಾಕ್ಷಿ ಸ್ವಾಗತಿಸಿದರು. ರಾಮ್ ಕುಮಾರ್ ವಂದನಾರ್ಪಣೆಗೈದರು. ವಿಜ್ಞಾನ ಶಿಕ್ಷಕಿ ಚೇತನಾ ಕಾರ್ಯಕ್ರಮ ನಿರೂಪಿಸಿದರು.


ಬಳಿಕ ಶೌರ್ಯ ತಂಡ ಹಾಗೂ ಊರವರಿಂದ ಶಾಲಾ ಆವರಣದಲ್ಲಿ ಗಿಡ ನಾಟಿ ನಡೆಯಿತು.ಆಂಗ್ಲ ಭಾಷಾ ಶಿಕ್ಷಕಿ ಚೇತನಾ ,
ಸೇವಾಪ್ರತಿನಿಧಿಗಳಾದ ಯಮುನಾ, ರೂಪಾ, ಸ್ವಚ್ಚತಾ ಸೇನಾನಿ ಸರೋಜಿನಿ , ಮುಂಡಾಜೆಯ ಸಚಿನ್ ಭಿಡೆ ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು, ಯೋಜನೆಯ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಜಮಲಾಬಾದ್ ಕೋಟೆಗೆ(ಗಡಾಯಿ ಕಲ್ಲು) ರೋಪ್‌ವೇ ನಿರ್ಮಾಣಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya
error: Content is protected !!