September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವ ದಾಖಲೆಗಳನ್ನು 10 ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವ್ಯವಸ್ಥಾಪನ ಮಂಡಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಸದಸ್ಯರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಗೇರುಕಟ್ಟೆ ನಿವಾಸಿ ದಿವಾಕರ ಆಚಾರ್ಯ ಹಾಗೂ ಜನಾರ್ದನ ಪೂಜಾರಿ ಸಲ್ಲಿಸಿರುವ ಅರ್ಜಿಯು ನ್ಯಾ| ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಜು. 3 ರಂದು ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವ್ಯವಸ್ಥಾ ಪನ ಮಂಡಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾ ದಾಯ ದತ್ತಿ ಕಾಯ್ದೆಯ ಸದಸ್ಯರನ್ನು ನೇಮಕ ಮಾಡಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸ್ಸಿನಂತೆ ನೇಮಕಾತಿ ನಡೆದಿದೆ ಎಂದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು 10 ದಿನಗಳಲ್ಲಿ ಹಾಜರುಪಡಿಸಬೇಕು ಎಂದು ಸರಕಾರಕ್ಕೆ ನಿರ್ದೇಶಿಸಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಲ್ಲಿಸಿದ್ದ ಶಿಫಾರಸ್ಸು ಪತ್ರದಲ್ಲಿ ಇದ್ದವರನ್ನು ವ್ಯವಸ್ಥಾಪನ ಸಮಿತಿಗೆ ಸದಸ್ಯರನ್ನಾಗಿ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಂತೆ ನೇಮಕ ನಡೆದಿದೆ. ಎಂ. ರಾಘವೇಂದ್ರ, ನೀನಾ ಕುಮಾರ್, ಪಿ. ರೀಟಾ, ಮೋಹಿನಿ, ಹೇಮಂತ್ ಕುಮಾರ್, ಶರತ್ ಕುಮಾರ್, ಎಚ್. ರಾಘವ, ಕೆ. ಹರೀಶ್ ಹಾಗೂ ಬಿ. ಹರೀಶ್ ಕುಮಾರ್ ಅವರನ್ನು ವ್ಯವಸ್ಥಾಪನ ಸಮಿತಿಗೆ ನೇಮಕ ಮಾಡಲಾಗಿದೆ. ಈ ನೇಮಕಾತಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಗೆ ವಿರುದ್ಧವಾಗಿದ್ದು, ಅದನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Related posts

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya
error: Content is protected !!