ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

ಕಡಿರುದ್ಯಾವರ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ, ಗ್ರಾಮ ಪಂಚಾಯತ್ ಕಡಿರುಧ್ಯಾವರ, ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ,‌ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ನೇತೃತ್ವದಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಜು.4 ರಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ನೇತ್ರಾವತಿಯವರು ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಶ್ರೀಮತಿ ಜೆಸಿಂತಾ ಡಿಸೋಜ ರವರು ಡೆಂಗ್ಯೂ ನಿಯಂತ್ರಣ ಬಗ್ಗೆ ತಿಳಿಸಿ ಶುಭ ಹಾರೈಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ರವರು ಉಪಸ್ಥಿತರಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇವರು ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸಲೀಂ ಆರೋಗ್ಯ ನಿರೀಕ್ಷಕರು, ಮಂಗಳೂರು ಮತ್ತು ಚೇತನ್ ನೋಡಲ್ ಕೀಟ ತಜ್ಞರು ಮಂಗಳೂರು ಇವರು ಡೆಂಗ್ಯೂ ಜ್ವರ ಹರಡುವಿಕೆ ಮತ್ತು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.

ಮಾನಿನಿ ಮಹಿಳಾ ರಾಜ್ಯ ಒಕ್ಕೂಟ ಮತ್ತು ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ನೇಹ ಜ್ಯೋತಿ ಒಕ್ಕೂಟದ ಸದಸ್ಯೆ ಶ್ರೀಮತಿ ಸಂಧ್ಯಾ ರವರು ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಮೂಡಿಸುವ ಹಾಡನ್ನು ತಾವೇ ರಚಿಸಿ ಹಾಡಿದರು. ಕೀಟ ತಜ್ಞರು ಡಾ.ರೇಷ್ಮ ಮತ್ತು ಆರೋಗ್ಯಾಧಿಕಾರಿ ಕಛೇರಿ ಸಿಬ್ಬಂದಿ ವರ್ಗದವರು,‌ ಜಿಲ್ಲಾ ನಿಯಂತ್ರಣಾಧಿಕಾರಿ ಕಛೇರಿ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು, ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗದವರು ಮತ್ತು ಸ್ನೇಹ ಜ್ಯೋತಿ ತಾಲೂಕು ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿ ಯಶಸ್ಸಿಗೆ ಸಹಕರಿಸಿದರು.

ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತ್ ವಠಾರದಲ್ಲಿ ಹಣ್ಣಿನ ಗಿಡ ನೆಡಲಾಯಿತು. ಸೊಳ್ಳೆ ಉತ್ಪತ್ತಿ ನಾಶದ ಬಗ್ಗೆ ಮನೆಮನೆ ಭೇಟಿ ಮೂಲಕ ಮಾಹಿತಿ ನೀಡಿ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಲಾಯಿತು
ಸಮೂದಾಯ ಆರೋಗ್ಯ ಶಿಕ್ಷಣ ಅಧಿಕಾರಿ ಶ್ರೀಮತಿ ಅಮ್ಮಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಆರೋಗ್ಯ ನಿರೀಕ್ಷಕರು ರಕ್ಷಿತ್ ವಂದಿಸಿದರು.

Related posts

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸಾಧಕರಿಗೆ ಅಭಿನಂದನೆ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya
error: Content is protected !!