23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

ಸುಲ್ಕೇರಿ: ಗಾರೆ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ಕಳೆದ ರಾತ್ರಿ ಜು. 4ರಂದು ನಡೆದಿದೆ.

ಮೃತ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25ವ) ಎಂದು ಗುರುತಿಸಲಾಗಿದೆ.

ಕಿಶೋರು ಅವರು ಗಾರೆ ಕೆಲಸ, ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಒಂದು ವಾರದಿಂದ ಮಂಕಾಗಿದ್ದು,ಯಾರಲ್ಲಿಯೂ ಹೆಚ್ಚು ಬೆರೆಯುತ್ತಿರಲಿಲ್ಲ. ನಿನ್ನೆ ಮಧ್ಯಾಹ್ನದಿಂದ ಅವರು ನಾಪತ್ತೆಯಾಗಿದ್ದು,ಸಂಜೆಯವರೆಗೆ ಮನೆಗೆ ಬಾರದೆ ಇದ್ದಾಗ ಸ್ಥಳಿಯರು ಸೇರಿ ಹುಡುಕಲು ಪ್ರಾರಂಭಿಸಿದರು.ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋರು ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಸ್ಥಳಕ್ಕೆ ವೇಣೂರು ಪೋಲಿಸರು ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ಇವರು ಸಹೋದರ ಕೀರ್ತನ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!