ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೆಳಗಿನ ಸ್ಪಷ್ಟನೆ ನೀಡಿದ್ದಾರೆ .
ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್ ಝೆರಾಕ್ಸ್ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.











