September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ‌ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೆಳಗಿನ ಸ್ಪಷ್ಟನೆ ನೀಡಿದ್ದಾರೆ .

ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್‌ ಝೆರಾಕ್ಸ್‌ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೆಬರಹವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೆ ಬರಹವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!