September 6, 2026
ಅಪರಾಧ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಲು ಸಿದ್ದವಿರುವುದಾಗಿ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವ್ಯಕ್ತಿಯ ಪರವಾಗಿ ವಕೀಲರ ತಂಡ ಜಿಲ್ಲಾ ಪೊಲೀಸರ ಕಛೇರಿಗೆ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ಬಗ್ಗೆ, ವೆಬ್ ನ್ಯೂಸ್ ವೊಂದರಲ್ಲಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತೆ, ಸುಳ್ಳು ಮಾಹಿತಿಯನ್ನು ವರದಿ ಮಾಡಿದ ಬಗ್ಗೆ ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ಮಾಡಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿ, ವಕೀಲರ ತಂಡ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಲು ಪೂರ್ವಾನುಮತಿ ಪಡೆದಿದ್ದಾರೆಯೇ ಎಂಬ ಬಗ್ಗೆ ಹಾಗೂ ವಕೀಲರ ತಂಡ ಬಂದಾಗ ಪೊಲೀಸ್ ವರಿಷ್ಠಾಧಿಕಾರಿಗಳು ಲಭ್ಯರಿಲ್ಲದಿರಲು ಕಾರಣವೇನು ಎಂಬ ಯಾವುದೇ ಮಾಹಿತಿಗಳನ್ನು ಪರಿಶೀಲಿಸದೇ, ಯಾವುದೇ ಸೂಕ್ತ ಸಾಕ್ಷಿ/ಪುರಾವೆಗಳು ಇಲ್ಲದೇ ಸುಳ್ಳು ಮಾಹಿತಿಯನ್ನು ವರದಿ ಮಾಡಿರುವುದು ದೃಢಪಟ್ಟಿರುತ್ತದೆ. ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 40/2025 ಕಲಂ :352, 353(1)b BNS ರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!