September 6, 2026
ಗ್ರಾಮಾಂತರ ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಇತ್ತೀಚೆಗೆ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿಯಲ್ಲಿ ಇರುವ ಇವರನ್ನು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಪದಾಧಿಕಾರಿಗಳು ಬೇಟಿಯಾಗಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಹಾಯಧನವನ್ನು ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಸ್ತಾಂತರಿಸಿದರು. ಘಟಕದ ಮಾಜಿ ಅಧ್ಯಕ್ಷ ಎಂ.ಕೆ ಪ್ರಸಾದ್, ಕೋಶಾಧಿಕಾರಿ ನಾಗೇಶ್ ಆದೇಲು, ಸಂಘಟನಾ ಕಾರ್ಯದರ್ಶಿ ಯೋಗೀಶ್ ಕಳಿಯ ಹಾಗೂ ಯುವವಾಹಿನಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya
error: Content is protected !!