22.9 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಸಂಘ-ಸಂಸ್ಥೆಗಳು

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

ತಣ್ಣೀರುಪಂತ: ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ತಣ್ಣೀರುಪಂತ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ ರಾಜ್ ತರಬೇತಿ ಉದ್ಘಾಟಿಸಿ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಶುಭ ಕೋರಿದರು. ಇತ್ತೀಚಿನ ದಿನಗಳಲ್ಲಿ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಗೆ ಹೆಚ್ಚಿನ ಬೇಡಿಕೆಯಿದ್ದು, ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು ಹಾಗೂ ತರಬೇತಿ ನಂತರ ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ, ತರಬೇತಿಯಲ್ಲಿ ಪಡೆದ ಕೌಶಲ್ಯವನ್ನು ಸ್ವ ಉದ್ಯೋಗ ಮಾಡುವಲ್ಲಿ ಪರಿವರ್ತನೆ ಮಾಡಲು ಕರೆ ನೀಡಿದರು. ವೇದಿಕೆಯಲ್ಲಿ ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ, ತಣ್ಣೀರುಪಂತ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಜಯರಾಜ್ ಜೈನ್, ಬ್ರೈಡಲ್ ಮೇಕ್ಅಪ್ ತರಬೇತುದಾರೆ ಸಂಧ್ಯಾ, ಟೈಲರಿಂಗ್ ತರಬೇತುದಾರೆ ಮೀನಾಕ್ಷಿ ಉಪಸ್ಥಿತರಿದ್ದರು.

ಸ್ನೇಹ ಕಾರ್ಯಕ್ರಮ ನಿರೂಪಿಸಿ, ಸುಮ ಸ್ವಾಗತಿಸಿ, ಶಿಲ್ಪಾ ಧನ್ಯವಾದ ಗೈದರು. ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 30 ಮಹಿಳೆಯರು ಈ ತಿಂಗಳ ತರಬೇತಿ ಪಡೆಯಲಿದ್ದಾರೆ.

Related posts

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya
error: Content is protected !!