25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

“ಬೆಳ್ತಂಗಡಿ : ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ತಮ್ಮ ಬದುಕನ್ನು ಸುಂದರವಾಗಿಸಲು ಹಾಗೂ ಗಟ್ಟಿಗೊಳಿಸಲು ಶಿಕ್ಷಣವು ಬಹಳ ಮುಖ್ಯವಾಗಿ ಬೇಕೇ ಬೇಕು. ಆದ್ದರಿಂದ ಪ್ರತಿಯೊಬ್ಬ ನಮ್ಮ ಸಮಾಜದ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಅತಿಹೆಚ್ಚಿನ ಗಮನವನ್ನು ನೀಡಿದರೆ ತಮ್ಮ ಬದುಕನ್ನು ಸುಂದರವಾಗಿಸಲು ಸಾಧ್ಯ. ಅಂತಹ ಮೂಲ ಉದ್ದೇಶವನ್ನು ಇಟ್ಟುಕೊಂಡು ಬೆಳ್ತಂಗಡಿಯ ಜೈನ ಮಹಿಳಾ ಸಮಾಜದವರು ಈ ಕಾರ್ಯಕ್ರಮವನ್ನು ಇಟ್ಟುಕೊಂಡಿರುವುದು ನಮ್ಮ ಬೇರೆ ಸಂಸ್ಥೆಯವರಿಗೆ ಮಾದರಿಯಾಗಿದೆ” ಎಂದು ಡಾ| ನವೀನ್ ಕುಮಾರ್ ಜೈನ್ ಹೇಳಿದರು.
ಅವರು ಬೆಳ್ತಂಗಡಿಯ ಜೈನ ಮಹಿಳಾ ಸಮಾಜ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ ಪಿನಾಕಿ ಹಾಲಿನಲ್ಲಿ ಜೂನ್ 29ರಂದು ಏರ್ಪಡಿಸಿರುವ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಜೈನ ಮಹಿಳಾ ಸಮಾಜದ ಸದಸ್ಯರ ಮಕ್ಕಳಿಗೆ ವಿದ್ಯಾ ಪ್ರೋತ್ಸಾಹ ಧನವನ್ನು ವಿತರಿಸಿ ಮಾತನಾಡಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿರುವ ಪ್ರೊಫೆಸರ್ ತ್ರಿಶಾಲ ಜೈನ್ ಇವರು *ತಾವು ನಮ್ಮ ಸಮಾಜದ ಆಸ್ತಿಯಾಗಬೇಕು ಮಾತ್ರವಲ್ಲದೆ ಯಾವತ್ತೂ ತಮ್ಮ ತಂದೆ ಹಾಗೂ ತಾಯಿ ಮತ್ತು ಗುರುಗಳನ್ನು ಮರೆಯದೆ ತಮ್ಮ ಬದುಕಿನಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆದು ಸಮಾಜದ ರತ್ನಗಳಾಗಿ ಮಿನುಗ ಬೇಕು. ಆಗ ನಮ್ಮ ಸಮಾಜದ ಈ ಕಾರ್ಯಕ್ಕೆ ತಾವು ಕೊಡುವ ಬಹಳ ದೊಡ್ಡ ಕೊಡುಗೆಯಾಗುತ್ತದೆ ಎಂದು ಹೇಳಿದರು. ವೇದಿಕೆಯಲ್ಲಿ ಜೈನ ಮಹಿಳಾ ಸಮಾಜದ ಹಿರಿಯ ಸದಸ್ಯರಾದ ಶ್ರೀಮತಿ ಮಮತಾ ಎಂ ಆರ್ ಜೈನ್ ಹಾಗೂ ಪ್ರಧಾನ ಕಾರ್ಯದರ್ಶಿ, ಶ್ರೀಮತಿ ರಾಜಶ್ರೀ ಎಸ್ ಹೆಗ್ಡೆ, ಕೋಶಾಧಿಕಾರಿ ಶ್ರೀಮತಿ ಅನುಪಮಾ ಜೈನ್ ಉಪಸ್ಥಿತರಿದ್ದರು.
ಆರಂಭದಲ್ಲಿ ಮಕ್ಕಳ ಪ್ರಾರ್ಥನೆಯೊಂದಿಗೆ ಸಭೆ ಆರಂಭಗೊಂಡು, ಜೈನ ಸಮಾಜದ ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಎಸ್ ಹೆಗ್ಡೆ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರೆ, ಶ್ರೀಮತಿ ಉಷಾ ಧನ್ಯವಾದ ಸಲ್ಲಿಸಿ, ಶ್ರೀಮತಿ ದವಳ ಕಾರ್ಯಕ್ರಮ ಸಂಯೋಜಿಸಿ, ಶ್ರೀಮತಿ ತ್ರಿಶಾಲ ಧನ್ಯವಾದ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು

Related posts

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya
error: Content is protected !!