23.5 C
ಪುತ್ತೂರು, ಬೆಳ್ತಂಗಡಿ
March 7, 2026
ಬೆಳ್ತಂಗಡಿರಾಜಕೀಯ

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಸಂಗಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಜು.5 ರಂದು ಬೆಳ್ತಂಗಡಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ನಗರ ಸಮಿತಿ ಹಾಗೂ ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ ಜರಗಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಸಂಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಸಂಘಟಿತ ಕಾರ್ಮಿಕ ಕಾಂಗ್ರೆಸಿನ ಅಧ್ಯಕ್ಷ ಅಬ್ಬಾಸ್ ಆಲಿ ವಹಿಸಿ ಮಾತನಾಡಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯನ್ನು ಬಲಿಷ್ಠಗೊಳಿಸಲು ಹಾಗೂ ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಗ್ರಾಮ ಪಂಚಾಯತ್ ಚುನಾವಣೆಯನ್ನು ಗೆಲ್ಲಿಸಲು ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಶ್ರಮಿಸಬೇಕು. ಸರಕಾರದಿಂದ ಸಿಗುವ ಪ್ರತಿಯೊಂದು ಸೌಲಭ್ಯವು ಕಾರ್ಮಿಕರಿಗೆ ತಲುಪಿಸುವ ಕೆಲಸವನ್ನು ಸಂಘಟಕರು ಮಾಡಬೇಕು ಎಂದರು.

ಅಸಂಗಡಿತ ಕಾರ್ಮಿಕ ಕಾಂಗ್ರೆಸ್ಸಿನ ಹಿರಿಯ 9 ಜನ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು.ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ನಿರಂಜನ್ ರೈ, ನಾರಾಯಣ ಮಚ್ಚಿನ, ಕೆವಿ ಜಾರ್ಜ್, ಗ್ರಾಮೀಣ ಅಧ್ಯಕ್ಷ ತುಕ್ರಂ ಗೌಡ ಹಾಗೂ ಸೇವಾದಳದ ಅಧ್ಯಕ್ಷ ಯೂಸುಫ್, ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಕರೀಂ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಮಹಿಳಾ ಕಾಂಗ್ರೆಸ್ಸಿನ ಜಿಲ್ಲಾ ಕಾರ್ಯದರ್ಶಿ ಜೀನತ್, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷ ಸತೀಶ್ ಬಂಗೇರ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯೆ ಸೌಮ್ಯ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ಸಿನ ಕಾರ್ಯದರ್ಶಿ ಇಸ್ಮಾಯಿಲ್, ವಿಕ್ರಮ್ ತಣ್ಣೀರುಪಂತ, ಪ್ರಮೋದ್ ಮಚ್ಚಿನ, ಐಬು ಕರಾಯ ಉಪಸ್ಥಿತರಿದ್ದರು.

ಬೆಳ್ತಂಗಡಿ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ಸಿನ ನಗರ ಅಧ್ಯಕ್ಷ ಅಬ್ದುಲ್ ರಜಾಕ್ ಸ್ವಾಗತಿಸಿದರು.

Related posts

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!