25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ರೆಖ್ಯ: ಗ್ರಾಮದಲ್ಲಿ ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲು ನಿರ್ಧಾರ

ರೆಖ್ಯ: ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ (75)ರ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ. ಆದರೆ ರೆಖ್ಯ ಗ್ರಾಮದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿ, ಜನರ ಜೀವ ಬಲಿಪಡೆಯುವಂತಾಗಿದೆ.

ಅವೈಜ್ಞಾನಿಕ ಕಾಮಗಾರಿಯ ವಿವರ: ಎಂಜಿರದಲ್ಲಿ ಸರ್ವಿಸ್ ರಸ್ತೆಮಾಡಿಲ್ಲ, ರಸ್ತೆ ಮದ್ಯದ ತಡೆಗೋಡೆಯಿಂದ ಶಾಲಾ ಮಕ್ಕಳು /ಸಾರ್ವಜನಿಕರು ರಸ್ತೆ ದಾಟಲು ಪರದಾಟ ಮಾಡುವಂತಾಗಿದೆ. ಕೋಳಾರು ಸಂಪರ್ಕ ರಸ್ತೆ ನೇಲ್ಯಡ್ಕದಲ್ಲಿ ಮುಖ್ಯ ರಸ್ತೆಗೆ ಸಂಪರ್ಕ ಮಾಡಿಲ್ಲ, ಅಗತ್ಯವಿದ್ದ ಕಡೆ ದಾರಿ ದೀಪ ಅಳವಡಿಸಿಲ್ಲ, ಅನಗತ್ಯ ಸ್ಥಳಗಳಲ್ಲಿ ಬಸ್ಸು ತಂಗುದಾಣ ನಿರ್ಮಾಣ ಮಾಡಿದ್ದಾರೆ, ಬೃಹತ್‌ ಗುಡ್ಡವಿರುವ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಿಲ್ಲ.

ಈ ಹಿನ್ನೆಲೆಯಲ್ಲಿ ಇದೇ ತಿಂಗಳ ಜು. 25ರ ಒಳಗೆ ಜನಪ್ರತಿನಿದಿಗಳು, ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸದಿದ್ದರೆ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ರೆಖ್ಯ ಗ್ರಾಮಸ್ಥರೆಲ್ಲರೂ ಮತ್ತು ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಸೇರಿ ಹೆದ್ದಾರಿ ತಡೆದು ಜು. 31ರಂದು ಎಂಜಿರ ಜಂಕ್ಷನ್ ಬಳಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ನಮ್ಮ ಮನವಿಯನ್ನು ಸ್ವಿಕರಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಇಲ್ಲದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಧರಣಿ ಕುಳಿತು ಪ್ರತಿಭಟನೆ ನಡೆಸುವುದಾಗಿ ಜು. 5ರಂದು ನಡೆಸಿದ ಪೂರ್ವ ಭಾವಿ ಸಭೆಯಲ್ಲಿ ತೀರ್ಮನಿಸಲಾಯಿತು.

ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಗುವ ಎಲ್ಲಾ ಸಮಸ್ಯೆಗಳಿಗೆ ಸರಕಾರವೇ ನೇರ ಹೊಣೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

Related posts

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!