24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿಗಳಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಆರಂಭಗೊಂಡು 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.
ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಇದುವರೆಗೆ ಇಲ್ಲಿನ ಭಜನಾ ಕಮ್ಮಟದಲ್ಲಿ ಭಾಗವಹಿಸದೆ ಇರುವವರಾಗಿರಬೇಕು. ಒಂದು  ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಅವಕಾಶವಿದ್ದು, ತಾವು ಕಲಿತು ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸಂಬಂಧಪಟ್ಟವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9663464648, 8147263422, 08256-266644

ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು.

Related posts

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya
error: Content is protected !!