28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಭಾರತೀಯ ಮಜ್ದೂರು ಸಂಘ ತಾಲೂಕಿನ ಸಮಿತಿ, ಬೆಳ್ತಂಗಡಿ ತಾಲೂಕು ಸಹಭಾಗಿತ್ವದಲ್ಲಿ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಟ್ಟಡ ಮತ್ತು ಇತರ ಕಾಮಗಾರಿ ಮಾಡುವ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಹಾಗೂ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆಯು ಜು.7ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಭಾರತೀಯ ಮಜ್ದೂರು ಸಂಘ ತಾಲೂಕಿನ ಸಮಿತಿ ಅಧ್ಯಕ್ಷರು, ವಕೀಲರು ಉದಯ್ ಕುಮಾರ್ ಬಿಕೆ ವಹಿಸಿದ್ದರು.

ಪ್ರತಿಭಟನೆಯ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಕಾರ್ಮಿಕ ನಿರೀಕ್ಷಕರ ಮೂಲಕ ರಾಜ್ಯ ಮುಖ್ಯಮಂತ್ರಿ ರವರಿಗೆ ಮನವಿಯನ್ನು ನೀಡಲಾಯಿತು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎನ್ ರಮೇಶ್, ರಾಜ್ಯ ಉಪಾಧ್ಯಕ್ಷ ಅಶ್ವಥ್ ಮರಿಗೌಡ್ರು ಬೆಂಗಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಸಂಚಾಲಕ ಕುಮಾರ್ ವೈ ಚಿತ್ರದುರ್ಗ, ಭಾರತೀಯ ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಭಾರತೀಯ ಮಜ್ದೂರು ಸಂಘ ತಾಲೂಕಿನ ಸಮಿತಿಯ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಿದರು.

Related posts

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾಲೂಕಿನ 212 ಫಲಾಭನುವಿಗಳಿಗೆ ವಿದ್ಯುತ್ ಚಾಲಿತ: ಹೊಲಿಗೆ ಯಂತ್ರ ಹಾಗೂ ಉಪಕರಣಗಳ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya
error: Content is protected !!