30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಇಂದಬೆಟ್ಟು ಇಂದಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ 2.5 NVG ಐಮಿತ್ರ ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ, ಸಮೃದ್ಧಿ ಸಂಜೀವಿನಿ ಒಕ್ಕೂಟ ಇಂದಬೆಟ್ಟು ಇದರ ಸಹಕಾರದೊಂದಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರವು ಜು. 7 ರಂದು ಇಂದಬೆಟ್ಟು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತನ ಹಿರಿಯ ಸದಸ್ಯರಾದ ವೀರಪ್ಪ ಮೊಯ್ಲಿ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್ ಇಂದಬೆಟ್ಟು ಸಹಕರಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ಸ್ವಾಗತಿಸಿದರು, ಸಂಸ್ಥೆಯ ಡಾಕ್ಟರ್ ರಾಮಚಂದ್ರ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಸೌಮ್ಯ, ಕವಿತಾ, ಪಂಚಾಯತ್ ಸಿಬ್ಬಂದಿಗಳು, ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

Related posts

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya
error: Content is protected !!