22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಕಣಿಯೂರು ಗ್ರಾಮ ಪಂಚಾಯತ್ ನ ದೈನಂದಿನ ಆಡಳಿತ ಕಾರ್ಯಗಳಿಗೆ ಅನುಕೂಲವಾಗುವ ಕಂಪ್ಯೂಟರ್ ಕೊಠಡಿ ಯು ಮಳೆಗಾಲದಲ್ಲಿ ನೀರು ಸುರಿದು ತೊಂದರೆಯಾಗುತ್ತಿದ್ದು, ಮತ್ತು ಫೈಲ್ ಗಳು ಮಳೆಗೆ ಒದ್ದೆಯಾಗುವ ಸಾಧ್ಯತೆಯನ್ನು ಅರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತ ದ ನಿರ್ಣಯ ದ ಮೇರೆಗೆ ಗ್ರಾಮ ಪಂಚಾಯತ್ ಕಟ್ಟಡದ ನವೀಕರಣ ಕಾರ್ಯ ಆರಂಭವಾಗಿತ್ತು. ಆದರೆ ಆರಂಭವಾದ ಕೆಲ ದಿನಗಳ ಬಳಿಕ ಕಣಿಯೂರು ಗ್ರಾಮದ ಸತೀಶ್ ರಾವ್ ಎಂಬವರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿಯವರ ಮುಂದೆ ಅರ್ಜಿ ಸಲ್ಲಿಸಿ ಕಣಿಯೂರು ಗ್ರಾಮ ಪಂಚಾಯತ್ ನವೀಕರಣಕ್ಕೆ ಕೈಗೊಂಡ ನಿರ್ಣಯ ಕಾನೂನು ಬಾಹಿರವಾಗಿದ್ದು ನಿರ್ಣಯ ವಜಾಗೊಳಿಸಿ ಕಾಮಗಾರಿಯನ್ನು ತಡೆಹಿಡಿಯಬೇಕೆಂದು ಕೋರಿದ್ದರು.

ಎರಡೂ ಕಡೆಯವರ ವಾದವನ್ನು ಆಲಿಸಿದ ಆಡಳಿತಾಧಿಕಾರಿಯವರು ಕಣಿಯೂರು ಗ್ರಾಮ ಪಂಚಾಯತ್ ಕೈಗೊಂಡ ನಿರ್ಣಯ ಕಾನೂನು ಪ್ರಕಾರ ಆಗಿದೆ ಎಂದು ಅಭಿಪ್ರಾಯಪಟ್ಟು ಸತೀಶ್ ರಾವ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಆಡಳಿತಾಧಿಕಾರಿಯವರ ಮೌಖಿಕ ಆದೇಶದನ್ವಯ ತಡೆಹಿಡಿಯಲಾಗಿದ್ದ ನವೀಕರಣ ಕಾಮಗಾರಿ ಸಂಪೂರ್ಣಗೊAಡಿರುತ್ತದೆ.

Related posts

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!