September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಹಾಗೂ ಶ್ರಾವಕ ಬಂಧುಗಳ ಸರ್ವ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಕಳೆದ ಹಲವಾರು ವರ್ಷಗಳಿಂದ ನೀಡುತ್ತಾ ಬರಲಾಗುತ್ತಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನವನ್ನು ನೀಡಲಾಗುತ್ತಿದೆ.

ಅದೇ ರೀತಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಧರ್ಮೀಯ ವಿದ್ಯಾರ್ಥಿಗಳನ್ನು 2025 ನೇ ಸೆಪ್ಟಂಬರ್ 21ರಂದು ಶ್ರೀಕ್ಷೇತ್ರ ಹೊಂಬುಜ ಮಠದ ಶ್ರೀ ಶ್ರೀಮದ್ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ನೀಡಿ ಪ್ರೋತ್ಸಾಹಿಸಲಾಗುವುದು.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ, ಗಿಂತ ಮೇಲ್ಪಟ್ಟು ಪಿಯುಸಿ, ಪದವಿ, ಐಟಿಐ, ಪಾಲಿಟೆಕ್ನಿಕ್, ಬಿಬಿಎಂ, ಎಂಬಿಎ, ಇಂಜಿನಿಯರಿಂಗ್, ವೈದ್ಯಕೀಯ ಇನ್ನಿತರ ವ್ಯಾಸಂಗವನ್ನು ಮುಂದುವರಿಸುತ್ತಿರುವ ವಿದ್ಯಾರ್ಥಿಗಳು ಮಾತ್ರ ನಿಗದಿತ ಅರ್ಜಿ ನಮೂನೆಯಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಕಚೇರಿಯಲ್ಲಿ ಪಡೆದುಕೊಳ್ಳುವುದು ಮತ್ತು ಅರ್ಜಿಯೊಂದಿಗೆ ಪ್ರಸ್ತುತ ಕಲಿಯುತ್ತಿರುವ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣ ಪತ್ರ, ಕಳೆದ ವರ್ಷ ಕಲಿತು ತೇರ್ಗಡೆ ಆಗಿರುವ ಬಗ್ಗೆ ಅಂಕಪಟ್ಟಿಯ ಯಥಾಪ್ರತಿ, ವಿದ್ಯಾರ್ಥಿಯ ಪ್ರಸ್ತುತ ಮನೆಯ ವಿಳಾಸ, ವಿದ್ಯಾರ್ಥಿಯ ಆಧಾರ್ ಕಾರ್ಡ್ ಯಥಾಪ್ರತಿ, ಸಂಪರ್ಕ ಸಂಖ್ಯೆ, ತಂದೆ ಮತ್ತು ತಾಯಿಯ ಹೆಸರು ನಮೂದಿಸಿ ಇವರಿಬ್ಬರಲ್ಲಿ ಒಬ್ಬರ ಸಹಿಯೊಂದಿಗೆ ಆಗಸ್ಟ್ 31ರ ಒಳಗೆ ಕೆ. ಜಯವರ್ಮರಾಜ್ ಬಳ್ಳಾಲ್, ಮ್ಯಾನೇಜಿಂಗ್ ಟ್ರಸ್ಟಿ, ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ, ಜೈನ್ ಪೇಟೆ, ಬೆಳ್ತಂಗಡಿ,-574214 ದಕ್ಷಿಣ ಕನ್ನಡ ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಬೇಕು.


ಅದೇ ರೀತಿ ಉಭಯ ಜಿಲ್ಲೆಗಳಲ್ಲಿ ತೀವ್ರತರದ ಕಾಯಿಲೆಗಳಾದ ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವ ಜೈನ ಸಮಾಜದ ಅರ್ಹ ಬಂಧುಗಳು ಕೂಡ ಈ ಬಗ್ಗೆ ಈ ಕೆಳಗಿನ ವಿಳಾಸದಾರರನ್ನು ಸಂಪರ್ಕಿಸಿದ್ದಲ್ಲಿ ಪರಿಶೀಲಿಸಿ ಅಗತ್ಯ ನೆರವು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ 08256-233577 ಅಥವಾ 9448180439,8310381962 ಸಂಖ್ಯೆಯ ದೂರವಾಣಿಯನ್ನು ಸಂಪರ್ಕಿಸಬಹುದೆಂದು ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕೆ. ಜಯವರ್ಮರಾಜ್ ಬಳ್ಳಾಲ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ

Related posts

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!