ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

ಮೂಡುಬಿದಿರೆ: ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜು.8 ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟಿಸಿ ಮಾತನಾಡಿದರು.

ನ್ಯಾಯವಾದಿ ಜಿನೇಂದ್ರ ಕುಮಾರ್ ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಾಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

Related posts

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!