ಬೆಳ್ತಂಗಡಿ: ದ್ವೇಷ ಭಾಷಣ ಮಾಡಿದ ಆರೋಪದಡಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾಯ೯ದಶಿ೯ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ವಿಎಚ್‌ಪಿಯ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ
ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಬುಧವಾರ ಮಧ್ಯಂತರ ತಡೆ ನೀಡಿದೆ.
ಎಫ್‌ಐಆರ್ ರದ್ದು ಕೋರಿ ಜಿ.ನವೀನ್ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ, ಕಡಬ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಎಂ.ಅರುಣ್ ಶ್ಯಾಮ್, “ಪೊಲೀಸರು ಅರ್ಜಿದಾರರ ಅಭಿವ್ಯಕ್ತಿ ಸ್ವಾತಂತ್ರ ಕಸಿದುಕೊಳ್ಳುವ ದುರುದ್ದೇಶದಿಂದ ಅವರ ಮಾತುಗಳಿಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ, ದುರುದ್ದೇಶಪೂರಿತವಾಗಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು,” ಎಂದು ಕೋರಿದರು.











