September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ದೀಪ ಪ್ರಜ್ವಲನ ಮಾಡುವುದರ ಮೂಲಕ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿ ಶಾಲೆಯಲ್ಲಿ ವಿವಿಧ ಸಂಘಗಳನ್ನು ರಚಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಂಘಗಳ ಅರಿವು ಮತ್ತು ಸಂಘಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಲು ಇದು ಸಹಕಾರಿಯಾಗುತ್ತದೆ, ಜೊತೆಗೆ ವಿವಿಧ ಸಂಘಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಂಡಾಗ ಮುಂದಿನ ದಿನಗಳಲ್ಲಿ ಅವುಗಳನ್ನು ಕಾರ್ಯರೂಪಕ್ಕೆ ತರಲು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ, ಶಾಲೆಯ ಶೈಕ್ಷಣಿಕ ವಿಷಯಗಳಿಗೆ ತನ್ನಿಂದ ಆಗುವ ಎಲ್ಲಾ ರೀತಿಯ ಸಹಕಾರಗಳನ್ನು ಇನ್ನು ಮುಂದೆಯೂ ನೀಡುವುದಾಗಿ ಎಂದು ತಿಳಿಸಿದರು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಲೆಯಲ್ಲಿ ವಿವಿಧ ಸಂಘಗಳನ್ನು ರಚಿಸುವುದರಿಂದ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಅಭಿವೃದ್ಧಿಯಾಗುತ್ತದೆ ಮತ್ತು ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಿಗೆ ಇದರ ಅನುಕೂಲಗಳಾಗುತ್ತವೆ ಎಂದು ತಿಳಿಸಿದರು.

ಶಾಲಾ ಶಿಕ್ಷಕಿ ಶ್ರೀಮತಿ ಪುಷ್ಪಲತಾ ರವರು ವಿವಿಧ ಸಂಘಗಳ ಮಹತ್ವ ಮತ್ತು ಉದ್ದೇಶವನ್ನು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಸ್ವಾಗತಿಸಿ.
ಶಾಲಾ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಧನ್ಯವಾದವಿತ್ತರು. ಶಾಲಾ ಶಿಕ್ಷಕ ಗೌರೀಶ್ ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya
error: Content is protected !!