22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

ಬೆಳ್ತಂಗಡಿ : ಸಂಜೀವಿನಿ – ಎನ್.ಆರ್.ಎಲ್.ಎಮ್ ತಾಲೂಕು ಅಭಿಯಾನ ನಿರ್ವಹಣಾ ಘಟಕ ಬೆಳ್ತಂಗಡಿ ಹಾಗೂ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಬೆಳ್ತಂಗಡಿ ತಾಲೂಕಿನ ಸಂಜೀವಿನಿ ಸ್ವ ಸಹಾಯ ಸಂಘಗಳಿಗೆ ಬ್ಯಾಂಕ್ ಲಿಂಕೇಜ್ ಕಾರ್ಯಕ್ರಮ ಜು.೭ ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.


ತಾಲೂಕಿನ ೯ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ೨೫ ಸಂಜೀವಿನಿ ಸ್ವಸಹಾಯ ಸಂಘಗಳಿಗೆ ಒಟ್ಟು ರೂ. ೧.೦೩ ಕೋಟಿ ಬ್ಯಾಂಕ್ ಸಾಲ ನೀಡಲಾಯಿತು.


ಕಾರ್ಯಕ್ರಮದಲ್ಲಿ ಎನ್.ಆರ್.ಎಲ್.ಎಮ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ, ಕೃಷಿಯೇತರ ಜೀವನೋಪಾಯ ವ್ಯವಸ್ಥಾಪಕ ನಿತೀಶ್, ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ, ಟಿ.ಎಮ್.ಐ.ಎಸ್ ವಿನೋದ್ ಪ್ರಸಾದ್, ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ನಾಯಕ್, ಬ್ಯಾಂಕ್ ಆಫ್ ಬರೋಡಾದ ಆರ್ಥಿಕ ಸೇರ್ಪಡೆ ವಿಭಾಗದ ವ್ಯವಸ್ಥಾಪಕಿ ಡಯಾನಾ, ಆದ್ಯತಾ ವಲಯದ ಉಸ್ತುವಾರಿ ಅಜಯ್, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಸಂಜೀವಿನಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya
error: Content is protected !!