September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಾಂತ್ ಕುಮಾರ್, ಜೀವಶಾಸ್ತ್ರ ಉಪನ್ಯಾಸಕರು, ಸರಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿ ಇವರು ವಿದ್ಯಾರ್ಥಿಗಳನದ್ದೇಶಿಸಿ, ‘ಪ್ರತಿಯೊಬ್ಬರೂ ತಾವು ಮಾಡಬೇಕಾದ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ’ ಎಂದರು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿನಯಚಂದ್ರ ಇವರು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು.
ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಸ್ವಯಂ ಸೇವಕಿ ನಳಿನಿ ನಿರೂಪಿಸಿ, ಭವಿಷ್ಯ ಧನ್ಯವಾದವಿತ್ತರು.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!