March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

ಬೆಳ್ತಂಗಡಿ: ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಮಲವಂತಿಗೆ ಗ್ರಾಮದ ಮಲ್ಲಕಜೆ ನದಿಯಲ್ಲಿ ಪ್ರವಾಹದ ರೀತಿಯಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ರಭಸದಿಂದ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.

ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ನದಿಗಳಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ಭೋರ್ಗರೆದು ಹರಿಯುತ್ತಿದೆ. ಈ ಮಳೆಗಾಲದಲ್ಲಿ ಪ್ರವಾಹದ ರೀತಿ ನೀರು ಹರಿಯುತ್ತಿರುವುದು ಮೊದಲು ಎಂದು ಸ್ಥಳೀಯರು ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚುತ್ತಿದೆ.
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳಲ್ಲಿ ಮಳೆ ನೀರು ಹಳ್ಳ ರೀತಿಯಲ್ಲಿ ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಟ್ಟಿನಲ್ಲಿ ಪುನರ್ವಸು ಅವಂತಾರ ಸೃಷ್ಟಿಸುತ್ತಾ ಎಂಬ ಭೀತಿ ಜನರಲ್ಲಿ ಮೂಡಿದೆ.

Related posts

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!