23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಗುರುವಾಯನಕೆರೆ: ಅಂಗಡಿಯ ಬದಿಯಲ್ಲಿ ಜಾಹೀರಾತು ಇರಿಸಿದ್ದ ಬ್ಯಾನರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿ ಪರಾರಿಯಾದ ಘಟನೆ ಜು.10 ರಂದು ಬೆಳಗ್ಗಿನ ಜಾವ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜುಲೈ 10 ರಂದು ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಗುರುವಾಯನಕೆರೆಯಲ್ಲಿರುವ ಸದಕತುಲ್ಲಾ ಎಂಬವರಿಗೆ ಸೇರಿದ ಜಿ.ಕೆ.ಸ್ಟೋರ್ ಹೆಸರಿನ ಅಂಗಡಿ ಬದಿಯಲ್ಲಿ ಇರಿಸಲಾಗಿದ್ದ ಜಾಹೀರಾತು ಬ್ಯಾನರ್ ಗೆ ಜುಲೈ 10 ರಂದು ಬೆಳಗ್ಗಿನ ಜಾವ ಸುಮಾರು 5 ಗಂಟೆ ಸಮಯದಲ್ಲಿ ಕಿಡಿಗೇಡಿಯೊರ್ವ ಬೆಂಕಿ ಹಚ್ಚಿದ್ದ ಓಡಿಹೋಗಿದ್ದ. ಈ ಬಗ್ಗೆ ಮಾಲೀಕ ಬೆಳಗ್ಗೆ ಅಂಗಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಿಸಿಕ್ಯಾಮರ ಪರಿಶೀಲನೆ ನಡೆಸಿದಾಗ ಕೃತ್ಯದ ಸಂಪೂರ್ಣ ದೃಶ್ಯ ಸೆರೆಯಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅಂಗಡಿ ಮಾಲೀಕ ಸದಕತುಲ್ಲಾ ಎಂಬವರು ದೂರು ನೀಡಿದ್ದು. ಪೊಲೀಸರು ಪ್ರಕರಣ ದಾಖಲಿಸಿದ್ದರು.ಬೆಂಕಿ ಹಚ್ಚಿದ ಕಿಡಿಗೇಡಿ ಆರೋಪಿ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಉಮೇಶ್ ಬಂಗೇರ(29) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಜುಲೈ 10 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಹಿಂದೆ ಆರೋಪಿ ಹೊಟೇಲ್ ನಡೆಸುತ್ತಿದ್ದು‌‌. ಇದೆ ಅಂಗಡಿಯಿಂದ 38 ಸಾವಿರದ ದಿನಸಿಗಳನ್ನು ಖರೀದಿಸಿದ ಹಣ ಬಾಕಿ ಇತ್ತು. ಈ ಹಣವನ್ನು ಅಂಗಡಿ ಮಾಲೀಕ ಜುಲೈ 9 ರಂದು ಒಳ್ಳೆಯ ರೀತಿಯಲ್ಲಿ ಕೊಡುವಂತೆ ಕರೆ ಮಾಡಿ ಮನವಿ ಮಾಡಿದ್ದರು.

ಈ ವಿಚಾರದಿಂದ ಕೋಪಗೊಂಡು ಬೆಂಕಿ ಹಚ್ಚಿರುವುದು ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ. ಬೆಂಕಿ ಹಚ್ಚಿದಾಗ ಪಕ್ಕದಲ್ಲಿ ಕಾರು ನಿಲ್ಲಿಸಲಾಗಿದ್ದು ಅದಲ್ಲದೆ ಅಂಗಡಿಗೆ ಬೆಂಕಿ ತಗುಲದೆ ಯಾವುದೇ ದೊಡ್ಡ ಅನಾಹುತ ಉಂಟಾಗಿಲ್ಲ ಎಂದು ಮಾಲೀಕ ಸದಕತುಲ್ಲಾ ಹೇಳಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹಾಗೂ ಸಿಬ್ಬಂದಿ ಮತ್ತು ಮಂಗಳೂರು ಎಫ್ಎಸ್ಎಲ್ ವಿಭಾಗದ ಸೋಕೋ ಸಿಬ್ಬಂದಿ ಅರ್ಪಿತಾ, ಕಾವ್ಯಶ್ರೀ, ಸುಮನ್ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!