September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ. ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ‘ ಈ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು. 10ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಶುಕ್ರವಾರ ಸಾಕ್ಷಿ, ದೂರುದಾರ ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ಹಾಜರುಪಡಿಸಿದ್ದಾರೆ ಎಂದು ಎಸ್ಪಿಯವರು ಹೇಳಿಕೆ ನೀಡಿದ್ದಾರೆ.

ಸಾಕ್ಷಿ, ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ, ಸಾಕ್ಷಿ, ದೂರುದಾರರನ್ನು ಪ್ರತಿನಿಧಿಸಿರುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್‌ಐಆ‌ರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ, ದೂರುದಾರರ ವಯಸ್ಸು ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತಿತರ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದಾರೆ. ಇದರ ಆಧಾರದಲ್ಲಿ ಸ್ಥಳೀಯ ಅನೇಕರು ಸಾಕ್ಷಿ, ದೂರುದಾರರನ್ನು ಅಂದಾಜಿಸಿರುತ್ತಾರೆ. ಆದರೆ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿರುತ್ತದೆ. ಈ ಬಗ್ಗೆ ಬಂಟ್ವಾಳ ಡಿಎಸ್ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Related posts

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ ಚಂದ್ರ ಶೆಟ್ಟಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೊಕೆಡಾಮ – ಜಪಾನಿನ ವಿಶಿಷ್ಟ ಸಸ್ಯ ನೆಡುವ ಕಲೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya
error: Content is protected !!