25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು.

ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯರನ್ನು ಗೌರವದಿಂದ ಕಾಣುವ ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಹಿರಿಯರ ಮಾರ್ಗದರ್ಶನದಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾಧ್ಯವಿದೆ ಎಂದು ಅವರು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ಹೊರ ಜಿಲ್ಲೆಗಳಲ್ಲಿಯೂ ಪ್ರತಿಷ್ಠಾನದ ಘಟಕಗಳನ್ನು ಆರಂಭಿಸುವ ಮೂಲಕ ಸೇವಾ ಚಟುವಟಿಕೆಗಳನ್ನು ವಿಸ್ತರಿಸಲು ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳು ಘಟಕದಿಂದ ನಡೆಸಿದ ಕಾರ್ಯಕ್ರಮದ ಮಾಹಿತಿ ನೀಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ವಿಚಾರ ವಿನಿಮಯದಲ್ಲಿ ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಕೇಂದ್ರ ಸಮಿತಿ ಉಪಾಧ್ಯಕ್ಷ ಯಂ. ಜಯರಾಮ ಭಂಡಾರಿ ಧರ್ಮಸ್ಥಳ, ಲೋಕೇಶ್ ಹೆಗ್ಡೆ ಪುತ್ತೂರು , ಕೋಶಾಧಿಕಾರಿ ಕೃಷ್ಣ ಶರ್ಮ ಅನಾರು, ಬಿ. ಭುಜಬಲಿ ಧರ್ಮಸ್ಥಳ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಸಂಚಾಲಕ ಭವಾನಿ ಶಂಕರ್ ಶೆಟ್ಟಿ ಪುತ್ತೂರು, ಪದ್ಯಾಣ ಕೇಶವ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾಣ್ಯಪ್ಪ ನಾಯ್ಕ್ ಉಜಿರೆ , ದಿನೇಶ್ ಗೌಡ ಗೇರುಕಟ್ಟೆ,ಉದಯಶಂಕರ ರೈ.ಕೆ, ರವೀಂದ್ರ ಶೆಟ್ಟಿ ಬಳೆಂಜ, ವಿಶ್ವಾಸ್ ರಾವ್ ಬೆಳ್ತಂಗಡಿ, ಸಾಂತೂರು ಶ್ರೀನಿವಾಸ ತಂತ್ರಿ, ಬಿ ಕುಸುಮಾವತಿ, ಗೋಪಾಲಕೃಷ್ಣ ಭಟ್ ಕಾಂಚೋಡು ಉಜಿರೆ, ಗಣೇಶ್ ಭಟ್ ಕುತ್ರೋಟ್ಟು, ಪ್ರೊ.ವೇದವ್ಯಾಸ ರಾಮಕುಂಜ, ಎಂ ವಿಶ್ವನಾಥ ಶೆಟ್ಟಿ ಸುಲ್ಕೇರಿ ಉಪಸ್ಥಿತರಿದ್ದರು.

ಜಿಲ್ಲಾ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಬೆಳ್ತಂಗಡಿ ಘಟಕ ಕಾರ್ಯದರ್ಶಿ ಗಣೇಶ್ ಭಟ್. ಕೆ ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಕೆ ವಂದಿಸಿದರು.

Related posts

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!