September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿ

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

ಧರ್ಮಸ್ಥಳ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಖ್ಯಾತ ಯುಟ್ಯೂಬರ್ ಸಮೀರ್ ಎಂ.ಡಿ ಎಂಬವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರ ದಾಖಲಿಸಲಾಗಿದೆ.

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳಿರುವ ವೀಡಿಯೋವನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನಲೆಯಲ್ಲಿ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಕಲಂ 192,240,353(1)(b)ಬಿಎನ್.ಎಸ್ ನಂತೆ ಪ್ರಕರಣ ದಾಖಲಿಸಿರುವುದಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya
error: Content is protected !!