23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಮನುಷ್ಯನಿಗೆ ಮಾನವಿಯತೆಯನ್ನು ತಿಳಿಸುವಲ್ಲಿ ಸಂಸ್ಕೃತಿ ಸಂಸ್ಕಾರಗಳ ಪಾತ್ರ ಮಹತ್ವವಾದದ್ದು ಎಂದು ಉಜಿರೆ ಎಸ್ ಡಿ ಎಂ ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಪರಂಪರಾ ವೇದಿಕೆಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತಿ-ಸಂಸ್ಕಾರ ಎನ್ನುವ ವಿಷಯದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಉತ್ತಮವಾದ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು. ಜೀವನದಲ್ಲಿ ಸಿಗುವ ಅವಕಾಶಗಳನ್ನು ಕೈ ಚೆಲ್ಲದೆ ಸದು ಉಪಯೋಗಿಸಿಕೊಂಡಾಗ ಯಶಸ್ಸನ್ನು ಗಳಿಸಲು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಪರಂಪರಾ ವೇದಿಕೆಯ ಸಂಯೋಜಕರಾದ ರವಿಶಂಕರ್ ಮತ್ತು ಶ್ರೀಮತಿ ಕಿಶೋರಿ ಎಸ್ ರಾವ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪೂಜಾ ಸ್ವಾಗತಿಸಿದರು. ಡೆಲಿಷಾ ಧನ್ಯವಾದವಿತ್ತರು. ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿದರು.

Related posts

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!