23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

ಬೆಳಾಲು: ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ ಬೆಳಾಲು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸ ಮಾಲೆ – 2 ರ ಕಾರ್ಯಕ್ರಮದಲ್ಲಿ ವರಕವಿ ಬೇಂದ್ರೆಯವರ ಕುರಿತು ಉಪನ್ಯಾಸ ಜರಗಿತು.

ದೀಪ ಬೆಳಗಿಸಿ, ಬೇಂದ್ರೆಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಧ. ಮಂ. ಪದವಿ ಕಾಲೇಜು ಉಜಿರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗಣ್ಣ ಡಿ.ಎ ಮಾತನಾಡಿ ಬೇಂದ್ರೆಯವರು ಆಡು ಮಾತಿನ ಶೈಲಿಯಲ್ಲಿ ಕವನಗಳನ್ನು ರಚಿಸಿ ಜನಜನಿತರಾದವರು, ಸರಳ ಜೀವನ, ವ್ಯಕ್ತಿತ್ವದಿಂದ ಶ್ರೇಷ್ಠತೆಯನ್ನು ಪಡೆದುಕೊಂಡವರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ ಮಾತನಾಡಿ ಸಾಹಿತ್ಯಾಸಕ್ತಿ ಮತ್ತು ಓದುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಜ್ಞಾನಶಕ್ತಿ ವಿಸ್ತರಿಸಲು ಸಾಧ್ಯವಾಗುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಇಂತಹ ಕಾರ್ಯಕ್ರಮದಿಂದ ಸಾಹಿತ್ಯದ ಕಂಪು ಎಲ್ಲೆಡೆ ಪಸರಿಸಲಿ ಎಂದರು.

ವಿದ್ಯಾರ್ಥಿಗಳು ಬೇಂದ್ರೆಯವರ ಭಾವಗೀತೆಗಳನ್ನು ಹಾಡಿದರು.

ಶಿಕ್ಷಕರಾದ ಕಿರಣ್ ಸ್ವಾಗತಿಸಿ, ಕು. ಐಶ್ವರ್ಯ ವಂದಿಸಿದರು. ಸುಮನ್ ಯು. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya
error: Content is protected !!