22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತುಹಾಕಿರುವ ಬಗ್ಗೆ ದೂರು ನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನುಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್‌ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಸಾಕ್ಷಿ ದೂರುದಾರನ ಗುರುತನ್ನು ಸಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್‌ ಉಪ ಅಧೀಕ್ಷಕರು ಇನ್ನೊಂದು ವಿಚಾರಣೆಯನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜು 13ರಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸಾಕ್ಷಿ ದೂರುದಾರ ಜು11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾನೆ ಅಲ್ಲದೆ ಕಳೇಬರದ‌ಅವಶೇಷವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದ.ಇದೇ ದಿನ ನೀಡಿದ್ದ ಪತ್ರಿಕಾಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದ ಎಸ್.ಪಿ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಸದ್ರಿ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು 10ರಂದು ತಕ್ಷಣವೇ ಜಾರಿ ಬರುವಂತೆ ಅನುಮೋದನೆ ನೀಡಿದೆ.

ಆದರೆ ಸಾಕ್ಷಿ ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ ಸಾಕ್ಷಿ ದೂರುದಾರೆನ್ನು ಪ್ರತಿನಿಧಿಸುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್ ಐ ಆರ್ ಪ್ರತಿಯನ್ನು ಮಾದ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ ಸಾಕ್ಷಿ ದೂರು ದಾರನ ವಯಸ್ಸು, ವೃತ್ತಿಯ ಸ್ಥಳ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳನ್ನು ಬಹಿರಂಗ ಪಡಿಸಿರುವುದರಿಂದ ಸ್ಥಳೀಯ ಅನೇಕರು ಸಾಕ್ಷಿ ದೂರುದಾರನನ್ನು ಅಂದಾಜಿಸಿದ್ದಾರೆ.

ಆದರೂ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗ ಪಡಿಸದಿರಲು ನಿರ್ಧರಿಸಲಾಗಿದೆ ಹಾಗೂ ಈ ಬಗ್ಗೆ ಬಂಟ್ವಾಳ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದರು.

Related posts

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!