24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತುಹಾಕಿರುವ ಬಗ್ಗೆ ದೂರು ನೀಡಿದ್ದ ಸಾಕ್ಷಿ ದೂರುದಾರನ ಗುರುತನ್ನುಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್‌ ಉಪ ಅಧೀಕ್ಷಕರು ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಸಾಕ್ಷಿ ದೂರುದಾರನ ಗುರುತನ್ನು ಸಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿರುವ ಬಗ್ಗೆ ಬಂಟ್ವಾಳ ಪೊಲೀಸ್‌ ಉಪ ಅಧೀಕ್ಷಕರು ಇನ್ನೊಂದು ವಿಚಾರಣೆಯನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಜು 13ರಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸಾಕ್ಷಿ ದೂರುದಾರ ಜು11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾನೆ ಅಲ್ಲದೆ ಕಳೇಬರದ‌ಅವಶೇಷವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದ.ಇದೇ ದಿನ ನೀಡಿದ್ದ ಪತ್ರಿಕಾಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದ ಎಸ್.ಪಿ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ಸದ್ರಿ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು 10ರಂದು ತಕ್ಷಣವೇ ಜಾರಿ ಬರುವಂತೆ ಅನುಮೋದನೆ ನೀಡಿದೆ.

ಆದರೆ ಸಾಕ್ಷಿ ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ ಸಾಕ್ಷಿ ದೂರುದಾರೆನ್ನು ಪ್ರತಿನಿಧಿಸುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್ ಐ ಆರ್ ಪ್ರತಿಯನ್ನು ಮಾದ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ ಸಾಕ್ಷಿ ದೂರು ದಾರನ ವಯಸ್ಸು, ವೃತ್ತಿಯ ಸ್ಥಳ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತು ಇತರೆ ಮಾಹಿತಿಗಳನ್ನು ಬಹಿರಂಗ ಪಡಿಸಿರುವುದರಿಂದ ಸ್ಥಳೀಯ ಅನೇಕರು ಸಾಕ್ಷಿ ದೂರುದಾರನನ್ನು ಅಂದಾಜಿಸಿದ್ದಾರೆ.ಆದರೂ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗ ಪಡಿಸದಿರಲು ನಿರ್ಧರಿಸಲಾಗಿದೆ ಹಾಗೂ ಈ ಬಗ್ಗೆ ಬಂಟ್ವಾಳ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದರು.

Related posts

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya
error: Content is protected !!