September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಕಡಬ, ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ. ಎಂಬವರ ದೂರಿನಂತೆ, ಜು.11 ರಂದು ತನ್ನ ಪೇಸ್‌ ಬುಕ್‌ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇನ್ನೊಂದು ಪ್ರಕರಣದಲ್ಲಿ, ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌ ಎಂಬವರ ದೂರಿನಂತೆ, ಜು.11ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಪೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಹಾಗೂ ಆಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿರುತ್ತದ್ದು, ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 59/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!