22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

ಗೇರುಕಟ್ಟೆ: ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ಬಂದು ಮನೆಯ ಶೆಡ್ ನಲ್ಲಿ ಮಾಂಸ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್ ಲೋಬೋ ಎಂಬವರ ಮನೆಯ ಶೆಡ್ ನಲ್ಲಿ ಅಕ್ರಮವಾಗಿ ಕೋವಿಯಿಂದ ಕಾಡು ಪ್ರಾಣಿ ಬೇಟೆಯಾಡಿ ತಂದು ಮಾಂಸ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿಕೊಂಡು ಕಾರಿನಲ್ಲಿಟ್ಟು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಜುಲೈ 12 ರಂದು ರಾತ್ರಿ ದಾಳಿ ಮಾಡಿ ಜುಲೈ 13 ರಂದು ಪ್ರಕರಣ ದಾಖಲಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ.

ದಾಳಿ ವೇಳೆ ಬೇಟೆಯಾಡಿ ಕಾಡು ಪ್ರಾಣಿ ಸಾಗಾಟಕ್ಕೆ ಬಳಸಿದ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಕುಲಾಯಿ ಮೇಗಿನ ಮನೆ ನಿವಾಸಿ ಶರತ್ ಶೆಟ್ಟಿ ಎಂಬಾತನಿಗೆ ಸೇರಿದ ರಕ್ತದ ಕಲೆಗಳಿದ್ದ KA-21-P-0345 ನಂಬರಿನ ಬಿಳಿ ಬಣ್ಣದ ಈಯೊನ್ ಕಾರು ,ಒಂದು ಸಿಂಗಲ್ ಬ್ಯಾರಲ್ ಕೋವಿ, ಮೂರು ಕಾಟ್ರೇಜ್,ಒಂದು ಕತ್ತಿ, 17 ಕೆ.ಜಿ ಕಾಡು ಪ್ರಾಣಿ ಮಾಂಸ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಕಾಡುಪ್ರಾಣಿ ಮಾಂಸವನ್ನು ಖಚಿತ ಪಡಿಸಿ ವರದಿಗಾಗಿ ಪ್ರಯೋಗಾಲಯಕ್ಕೆ ಅರಣ್ಯಾಧಿಕಾರಿಗಳು ಕಳುಹಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಆರೋಪಿಗಳಾದ ಜೋಸ್ಸಿ ಅಲ್ವಿನ್ ಲೋಬೋ ಮತ್ತು ಶರತ್ ಶೆಟ್ಟಿ ವಿರುದ್ಧ ಜುಲೈ 13 ರಂದು ವನ್ಯಜೀವಿ ಅಪರಾಧ ಪ್ರಕರಣ ದಾಖಲಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿದ ಬಳಿಕ ಪ್ರಕರಣದ ಸತ್ಯಸತ್ಯತೆ ತಿಳಿದುಬರಲಿದೆ.ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್.ಟಿ.ಎನ್ , ಡಿ.ಆರ್.ಎಫ್.ಒ ಸಂದೀಪ್,ರಾಘವೇಂದ್ರ,ಕಿರಣ್ ಪಾಟೀಲ್ , ಕಮಲ, ಬೀಟ್ ಫಾರೆಸ್ಟರ್ ಪಾರಶುರಾಮ್ ಮೇಟಿ ,ಚಾಲಕ ದಿವಕರ್ ಭಾಗವಹಿಸಿದರು.

ಕುಖ್ಯಾತ ಕಾಡು ಬೇಟೆ ಗ್ಯಾಂಗ್?: ಈ ಕುಖ್ಯಾತ ಕಾಡು ಪ್ರಾಣಿ ಬೇಟೆ ತಂಡದಲ್ಲಿ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತಲಿನ ಸುಮಾರು 20 ಮಂದಿಗೂ ಅಧಿಕ ಸದಸ್ಯರು ಹೊಂದಿದ್ದು. ಇವರಲ್ಲಿ ಲೈಸೆನ್ಸ್ ಕೋವಿ ಹಾಗೂ ಅಕ್ರಮ ಕೋವಿ ಹೊಂದಿದವರೆ ಸದಸ್ಯರಾಗಿದ್ದಾರೆ. ಇವರು ಕಳೆದ ಕೆಲ ವರ್ಷಗಳಿಂದ ಅಕ್ರಮ ಬೇಟೆಯಲ್ಲಿ ನಿರತರಾಗಿದ್ದರು. ಈ ಒಂದು ತಿಂಗಳಲ್ಲಿ 30 ಕಾಡುಪ್ರಾಣಿ ಬೇಟೆಯಾಡಿದ್ದಾರೆ ಎಂದು ಈ ಬೇಟೆಗಾರರ ಸದಸ್ಯರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ತಂಡದ ಸದಸ್ಯರು ರಾತ್ರಿಗಿಂತ ಹಗಲು ಹೊತ್ತು ಹೆಚ್ಚಾಗಿ ಬೇಟೆಯಲ್ಲಿ ನಿರತರಾಗುತ್ತಿದ್ದರು. ಯಾವ ಕಡೆ ಕಾಡಿನಲ್ಲಿ ಹೋಗಿ ಕಾಡು ಪ್ರಾಣಿ ಬೇಟೆಯಾಡಿದ್ರೂ ಗೇರುಕಟ್ಟೆ ಇದೆ ಜೋಸ್ಸಿ ಅಲ್ವಿನ್ ಲೋಬೋ ಮನೆಯ ಶೆಡ್ ನಲ್ಲಿ ಮಾಂಸ ಮಾಡಿ ಬೇಕಾದವರಿಗೆ ಹಣಕ್ಕಾಗಿ ವಿತರಿಸುತ್ತಿದ್ದರು ಎನ್ನಲಾಗಿದೆ.

Related posts

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!