September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ.


ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಯ ವಾಚನ-ಪ್ರವಚನ ನಡೆಯುತ್ತದೆ.
ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.


ಜುಲೈ 16 ರಂದು ಬುಧವಾರ ಮತ್ತು 17 ರಂದು ಗುರುವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.


ಉದ್ಘಾಟನಾ ಸಮಾರಂಭ:
ಜುಲೈ 16 ರಂದು ಸಂಜೆ 5 ಗಂಟೆಗೆ ಯಕ್ಷಗಾನ ಬಯಲಾಟ ಅಕಾಡೆಮಿಯ “ಯಕ್ಷಸಿರಿ” ಪ್ರಶಸ್ತಿ ಪುರಸ್ಕೃತರಾದ ಹಾಗೂ ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Related posts

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!