23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

ಲಾಯಿಲ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನದ ಶಿಕ್ಷಣ ಅತಿ ಮೌಲ್ಯವುಳ್ಳದ್ದು. ಬರೀ ಓದಿದರೆ ಸಾಲದು ಇಂದು ವಿದ್ಯಾರ್ಥಿಗಳು ತುಂಬಾ ಪ್ರಯತ್ನವನ್ನು ಮಾಡಬೇಕು. ಹಾಗೆಯೇ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಒಳ್ಳೆಯ ವಿದ್ಯೆ ಇದ್ದರೆ; ಉದ್ಯೋಗದ ಜೊತೆಗೆ ಭವಿಷ್ಯ ಉತ್ತಮವಾಗಿರುತ್ತದೆ. ಉದ್ಯೋಗ ನಮಗೆ ಗೌರವ ತಂದು ಕೊಡುತ್ತದೆ. ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ-ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಕೃಷ್ಣ ಟಿ. ಇವರು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ರಮೇಶ್ ಉಪಸ್ಥಿತರಿದ್ದು, ಕಂಪ್ಯೂಟರ್ ಶಿಕ್ಷಣವು ಮುಂದಿನ ನಿಮ್ಮ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ತುಂಬಾ ಸಹಾಯವಾಗಲಿದೆ. ಎಲ್ಲಾ ವಿದ್ಯಾರ್ಥಿಗಳ ಕನಸು ನನಸಾಗಲಿ ಎಂದರು.
ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 37 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 10 ಮಂದಿ ಉನ್ನತ ಶ್ರೇಣಿ ಹಾಗೂ 26 ವಿದ್ಯಾರ್ಥಿಗಳು ʼಎʼ ಗ್ರೇಡ್ ನಲ್ಲಿ ಉತ್ತೀರ್ಣರಾಗಿ ಶೇ. 100 ಫಲಿತಾಂಶ ಬಂದಿದೆ.


ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರು ಜಯಶ್ರೀ ನಿರ್ವಹಣೆ ಮಾಡಿ, ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
error: Content is protected !!