July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಎಸ್.ಡಿ.ಎಮ್ -ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮವು ಜು.10 ರಂದು ಪ್ರಾರಂಭವಾಗಿ ಜು. 12 ರವರೆಗೆ ನಡೆಯಿತು.

ಕಾರ್ಯಕ್ರಮ ಬೆಂಗಳೂರಿನ ಆರ್ಯ ಚಾಣಕ್ಯ ಟೆಕ್ನಾಲಜಿ ಲಿಮಿಟೆಡ್‌ನ ನುರಿತ ತರಬೇತುದಾರ ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ನಾರಾಯಣ ಕೆ ತರಬೇತಿಯ ನೇತೃತ್ವ ವಹಿಸಿದ್ದರು. ತಮ್ಮ ಉದ್ಯಮದ ಅನುಭವ ಮತ್ತು ತಾಂತ್ರಿಕ ಪರಿಣತಿಯೊಂದಿಗೆ, ನಾರಾಯಣ ಕೆ ಅವರು ವಿದ್ಯಾರ್ಥಿಗಳಿಗೆ ಡೇಟಾ ನಿರ್ವಹಣೆಗಾಗಿ MS Excel with Power BI ಪಾತ್ರ ಮತ್ತು ವ್ಯವಹಾರ ಕ್ಷೇತ್ರದಲ್ಲಿ ವರದಿ ಮಾಡಲು MS Excel with Power BI ನ ಪ್ರಾಯೋಗಿಕ ಕೌಶಲ್ಯ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.

ವಿನ್ಯಾಸಗೊಳಿಸಲಾದ ತರಬೇತಿಯಲ್ಲಿ ಸಮಗ್ರ ಆಧುನಿಕ ಕೈಗಾರಿಕೆಗಳಲ್ಲಿ ಬಳಸುವ ದತ್ತಾಂಶ ವಿಶ್ಲೇಷಣೆ ಮತ್ತು ವರದಿ ಮಾಡುವ ಸಾಧನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು ಡಿಜಿಟಲ್ ವಿಶ್ಲೇಷಣೆ ಮತ್ತು ವ್ಯವಹಾರ MS Excel with Power BI ನ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ವ್ಯಕ್ತಪಡಿಸಿ ಕಲಿತುಕೊಂಡರು.

ತರಬೇತಿ ಕಾರ್ಯಾಗಾರದಲ್ಲಿ ಅಂತಿಮ ವರ್ಷದ ವಾಣಿಜ್ಯ ವಿಭಾಗದಿಂದ 84 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಾಂಶುಪಾಲರಾದ ಡಾ. ವಿಶ್ವನಾಥ ಪಿ ರವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ಇವರು ಕಾರ್ಯಕ್ರಮವನ್ನು ಸಂಘಟಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya
error: Content is protected !!