ಉರುವಾಲು : ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಂದ್ರ ಭಾರತೀ ಮಹಾ ಸ್ವಾಮಿಗಳ 50ನೇ ವರ್ಧಂತಿ ಪ್ರಯುಕ್ತ ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ಜು.12 ರಂದು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇವರ ಸಹಯೋಗದೊಂದಿಗೆ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜರುಗಿತು.
ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭಗೊಂಡು ,ಅಥಿತಿ ಗಣ್ಯರಿಂದ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಮಂಡಲದ ಅಧ್ಯಕ್ಷ ಪ್ರಸನ್ನ ಪೇರ್ನೆಕೋಡಿ, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ರವಿರಾಜ್ ಉರುವಾಲು, ರಾಜ ಮಂದಿರ, ಉರುವಾಲು ವಲಯದ ಅಧ್ಯಕ್ಷ ಕೃಷ್ಣ ಭಟ್ ಹತ್ತೊಕ್ಕಲು ಉಪಸ್ಥಿತರಿದ್ದರು.
ಸಭಾಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ದರ್ಶಕರಾದ ಶ್ರೀ ಮಾಯಿಲ್ತೊಡಿ ಈಶ್ವರ ಭಟ್ ವಹಿಸಿದ್ದರು. ಸೇವಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಸಹಶಿಕ್ಷಕ ಮಂಜು ಗಣೇಶ್ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಪೋಷಕ ವೃಂದದವರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











