ಬಳಂಜ: ನಾಲ್ಕೂರು ಗ್ರಾಮದ ಜೈಮಾತ ಮನೆಯ ಶ್ರೀಮತಿ ಸುಶೀಲ (68ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಜು.14 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾದರು.
ಮೃತರು ಮೂವರು ಪುತ್ರರಾದ ವಿಶ್ವನಾಥ ಪೂಜಾರಿ,ಸತೀಶ್ ಪೂಜಾರಿ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮಾಜಿ ಅಧ್ಯಕ್ಷ ಸುರೇಶ್ ಪೂಜಾರಿ, ಒರ್ವೆ ಪುತ್ರಿ ಶಕುಂತಳಾ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.











