37.9 C
ಪುತ್ತೂರು, ಬೆಳ್ತಂಗಡಿ
March 6, 2026
ಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನ ಕಾರ್ಯಕ್ರಮ

ಬೆಳ್ತಂಗಡಿ : ಕೆಪಿಎಸ್ ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನ ಕಾರ್ಯಕ್ರಮ ಜು.15ರಂದು ನೆರವೇರಿತು

. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಎಳವೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಂಡರೆ ಜೀವನದಲ್ಲಿ ಬಹಳ ಎತ್ತರಕ್ಕೆ ಬೆಳೆಯುವುದಕ್ಕೆ ಸಾಧ್ಯ. ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆ ಇದಕ್ಕೆ ಪೂರಕ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಮಡಂತ್ಯಾರ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜೋಯಲ್ ಮೆಂಡೋನ್ಸ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒತ್ತು ನೀಡಿದಲ್ಲಿ ಅದ್ಭುತವಾದ ಪ್ರಗತಿ ಹೊಂದಲು ಸಾಧ್ಯ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಮಾತನಾಡಿದಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೂಪ ನವೀನ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಪ್ರಸ್ತಾವಿಕ ಸ್ವಾಗತಿಸಿ ಈ ಸಂದರ್ಭದಲ್ಲಿ 2025 ನೇ ಮಾರ್ಚ್ ತಿಂಗಳಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ 38 ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಿ ಪುರಷ್ಕರಿಸಲಾಯಿತು. ಡಾ. ವಾಸಂತಿ ಎಂ ಕೆ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕಿ ಸುಪ್ರೀತ ವಂದಿಸಿದರು. ಉಪನ್ಯಾಸಕಿ ತಾಹೀರಬಾನು ನಿರೂಪಿಸಿದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!