September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ :ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಇವುಗಳ ಸಹಕಾರದಿಂದ ಕ್ಲಸ್ಟರ್ ಮಟ್ಟದ ಲಿಂಗ ಸಮಾನತೆ ಮತ್ತು ನ್ಯಾಯದ ಕುರಿತು ತರಬೇತಿ ಕಾರ್ಯಕ್ರಮವನ್ನು ಜು.15 ಮತ್ತು 16 ಎರಡು ದಿನಗಳು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಕ್ರಾಸ್ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕರಾದ ವಂ.ಫಾ. ರಿಚರ್ಡ್ ಪಾಯಸ್ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ರಾಜ್ಯ ಸಂಯೋಜಕಿ ಸಿ. ನ್ಯಾನ್ಸಿ ಲೋಬೊ ಹಾಗೂ ವಂ. ಫಾ. ರಿಚರ್ಡ್ ಪಾಯಸ್ ರವರು ಲಿಂಗ ಸಮಾನತೆ ಮತ್ತು ನ್ಯಾಯದ ಬಗ್ಗೆ ತರಬೇತಿ ನೀಡಿದರು. ಶ್ರೀಮತಿ ಸೀಮಾ, ಸಿ.ಒ.ಡಿ.ಪಿ, ಶ್ರೀಮತಿ ಐಡಾ, ಸಂಪದ, ಮತ್ತು ಶ್ರೀಮತಿ ಅನಿಜಾ, ಕಿಡ್ಸ್ ಸಂಸ್ಥೆ ಇಲ್ಲಿನ ಒಕ್ಕೂಟ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಿಡ್ಸ್ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತೆ ಶ್ರೀಮತಿ ಸುಶೀಲಾ ಸ್ವಾಗತಿಸಿದರು. ಮಾರ್ಕ್ ಡಿ ಸೋಜ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 40 ಮಂದಿ ಭಾಗವಹಿಸಿದ್ದರು.

Related posts

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya
error: Content is protected !!