ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ವಿಜಯರತ್ನ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದು ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ಸಂಸ್ಥೆಯಿಂದ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪೃಥ್ವಿ ಜ್ಯವೆಲ್ಸ್ ಬೆಳ್ತಂಗಡಿ ವ್ಯವಸ್ಥಾಪಕ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು, ಎಕ್ಸೆಲ್ ಕಾಲೇಜಿನ ಉದ್ಯೋಗಿ ರಿತೇಶ್ ಹಾಗೂ ಇತರರು ಉಪಸ್ಥಿತರಿದ್ದರು.











