September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

ಉಜಿರೆ : ಇಲ್ಲಿಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ಪ್ರಥಮ ಚಿಕಿತ್ಸೆ, ಆರೋಗ್ಯ ಕಾಳಜಿ ಮತ್ತು ನೈರ್ಮಲ್ಯ’ ಎಂಬ ವಿಷಯದ ಬಗ್ಗೆ ಜು.16 ರಂದು ಮಾಹಿತಿ ಕಾರ್ಯಾಗಾರ ನಡೆಯಿತು.

ಸ್ಥಳೀಯ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಮತ್ತು ಶ್ರೀಮತಿ ಸುಮಂಜಲ ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಮಳೆಗಾಲದಲ್ಲಿ ಹೇಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ತಮ್ಮ ವೈಯಕ್ತಿಕ ಸ್ವಚ್ಛತೆಗೆ ಬಹಳಷ್ಟು ಜಾಗ್ರತೆ ವಹಿಸಬೇಕು ಎಂಬುದನ್ನು ಕೆಲವು ಚಟುವಟಿಕೆಗಳ ಮೂಲಕ ತಿಳಿಸಿಕೊಟ್ಟರು.

ಮಳೆಗಾಲದಲ್ಲಿ ಕಂಡು ಬರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಸಿಕೊಟ್ಟರು. ಸಿಸ್ಟರ್ ಸಿರಿಷಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿಯರಾದ ಜೆಸಿಂತಾ ಹಾಗೂ ನಳಿನಿ ಸಹಕರಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!