September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ


ಉಜಿರೆ : ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭವು ಜು. 15 ರಂದು ಕಾಲೇಜಿನ ಸಭಾಂಗಣದಲ್ಲಿ ನೆರೆವೇರಿತು.

ಉದ್ಘಾಟನಾ ಕಾರ್ಯಕ್ರಮವನ್ನು ಎಸ್.ಯನ್.ಯಂ ಪಾಲಿಟೆಕ್ನಿಕ್, ಮೂಡಬಿದಿರೆ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ರಾಮ್ ಪ್ರಸಾದ್ ಉದ್ಘಾಟಿಸಿ, ಯುವಕ ಯುವತಿಯರಿಗೆ ವ್ಯಕ್ತಿತ್ವ ವಿಕಸನ, ದೇಶಪ್ರೇಮ ಮತ್ತು ಸಹಾಯ ಮನೋಭಾವಕ್ಕೆ ಈ ರೀತಿಯ ಸ್ವಯಂ ಸೇವಾ ಸಂಘಟನೆಗಳು ಅವಶ್ಯಕವಾಗಿದೆ, ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಜೀವನಕ್ಕೆ ಪೂರಕ ಎಂದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಶುಭಹಾರೈಸಿದರು. ಸಭಾ ಕಾರ್ಯಕ್ರಮವನ್ನು ಸ್ವಯಂ ಸೇವಕಿ ಮಂಜುಷ ಸ್ವಾಗತಿಸಿ, ಅಭಿಜ್ಞಾ ವಂದಿಸಿದಳು. ಸ್ವಯಂ ಸೇವಕಿ ಭವಿತಾ ನಿರೂಪಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya
error: Content is protected !!