September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

ತೆಕ್ಕಾರು: ಬೆಳ್ತಂಗಡಿ ಜಿ.ಪಂ. ತೋಟಗಾರಿಕೆ ಇಲಾಖೆ ತೆಕ್ಕಾರು ಪ್ಯಾಕ್ಸ್ ಹಾಗೂ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮ ಹಾಗೂ ವಿಮಾಯೋಜನೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ಜು.16 ರಂದು ತೆಕ್ಕಾರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದ್ದರು. ತೆಕ್ಕಾರು ಪ್ಯಾಕ್ಸ್ ಅಧ್ಯಕ್ಷ ಬಿ. ಅಬ್ದುಲ್ ರಝಾಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈ ವರ್ಷದ ಭಾರಿ ಮಳೆಗೆ ಅಡಿಕೆ ಹಾಗೂ ಕಾಲು ಮೆಣಸು ರೋಗದಿಂದ ಬಹಳಷ್ಟು ರೈತರಿಗೆ ನಷ್ಟವಾಗಿದೆ ಇದಕ್ಕೆ ಸರಕಾರ ಸೂಕ್ತವಾದ ಪರಿಹಾರವನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದರು.

ವಿಟ್ಲ ಸಿ.ಪಿ.ಸಿ.ಆರ್.ಐ. ವಿಜ್ಞಾನಿ ಡಾ.ಭವಿಷ್ಯ ಮಾಹಿತಿ ನೀಡಿದರು. ಬೆಳ್ತಂಗಡಿ ಜಿ.ಪಂ.ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಎಸ್ ಚಂದ್ರಶೇಖರ್ ಉಪಸ್ಥಿತರಿದ್ದರು. ಪ್ಯಾಕ್ಸ್ ಹಾಗೂ ಗ್ರಾ.ಪಂ. ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ರೈತರು ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಮಹಾವೀರ್, ಕಾರ್ಯನಿರ್ವಾಹಣಾಧಿಕಾರಿ ರಾಘವೇಂದ್ರ ಅಡಪ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಸಹಕರಿಸಿದರು. ನಿರ್ದೇಶಕ ಇನಾಸ್ ರೋಡಿಗ್ರಸ್ ಸ್ವಾಗತಿಸಿ, ಗ್ರಾ.ಪಂ. ಸಿಬ್ಬಂದಿ ಸಿಹಾಬು ವಂದಿಸಿದರು.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!